×
Ad

KARKALA | ಸಾಣೂರು: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

Update: 2026-01-16 10:35 IST

ಕಾರ್ಕಳ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ.

ಮುದ್ದಣ್ಣ ನಗರದ ವಾರಿಜಾ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಂಡಿವೆ.

ಮನೆಯ ಹೊರಪಾರ್ಶ್ವದಲ್ಲಿ ಸ್ಫೋಟ ಸಂಭವಿಸಿದ್ದರಿಂದ ಯಾರಿಗೂ ಹಾನಿಯಾಗಿಲ್ಲ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.

ಘಟನೆಯಲ್ಲಿ ಸುಮಾರು 3 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News