ಕಾರ್ಕಳ | ಮಿಯಾರು ಬಳಿ ಭೀಕರ ಅಪಘಾತ: ತೂಫನ್ ವಾಹನದಲ್ಲಿದ್ದ ಮೂವರು ಮೃತ್ಯು, ಆರು ಮಂದಿಗೆ ಗಾಯ
Update: 2026-01-23 15:50 IST
ಕಾರ್ಕಳ, ಜ.23: ಖಾಸಗಿ ಬಸ್ಸೊಂದು ತುಫಾನ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು ಆರು ಮಂದಿ ಗಾಯಗೊಂಡ ಭೀಕರ ಘಟನೆ ಮಿಯಾರು ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ.
ಧರ್ಮಸ್ಥಳದಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ಕ್ರಾಸ್‌ನಲ್ಲಿ ಅತೀ ವೇಗದಿಂದ ಚಲಾಯಿಸಿಕೊಂಡು ಬಂದು, ರಸ್ತೆಯ ಇನ್ನೊಂದು ಬದಿಯಲ್ಲಿ ಹೋಗುತ್ತಿದ್ದ ತೂಫನ್ ವಾಹನಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ತುಫಾನ್ ಕಾರ್ಕಳ ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿತ್ತು.
ಇದರಿಂದ ತುಫಾನ್ ವಾಹನ ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದವರು ತೀವ್ರವಾಗಿ ಗಾಯಗೊಂಡರೆನ್ನಲಾಗಿದೆ. ಇವರ ಪೈಕಿ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡರೆಂದು ತಿಳಿದು ಬಂದಿದೆ.
ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.