×
Ad

ಕಾರ್ಕಳ | ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Update: 2025-12-05 20:52 IST

ಕಾರ್ಕಳ, ಡಿ.5: ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನ.27ರಂದು ಮನೆಯಲ್ಲಿ ವ್ಯಕ್ತಿಯೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂಡಬಿದ್ರೆಯ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಡಿ.4ರಂದು ಮೃತಪಟ್ಟಿದ್ದಾರೆ.

ಮೃತರನ್ನು ಈದು ಗ್ರಾಮದ ಕಂಠಾವು ನಿವಾಸಿ ಗಂಗಯ್ಯ ದೇವಾಡಿಗ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News