ಕಾರ್ಕಳ: ಮಿಯ್ಯಾರಿನ ಲವ-ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ ಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ (ರಿ) ಹಾಗೂ ಜಿಲ್ಲಾ ಕಂಬಳ ಸಮಿತಿ (ರಿ)ಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪ್ರಥಮ ವರ್ಷದ ಕಂಬಳ ಓಟದ ತರಬೇತಿ ಶಿಬಿರಕ್ಕೆ ಮಾಜಿ ಸಚಿವ ಹಾಗೂ ಶಾಸಕ ವಿ. ಸುನೀಲ್ ಕುಮಾರ್ ಚಾಲನೆ ನೀಡಿದರು.

ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದ ಅವರು ರಾಜ್ಯ ಕಂಬಳ ಸಮಿತಿಯ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿ. ಸುನೀಲ್ ಕುಮಾರ್, ಕಂಬಳ ಕ್ರೀಡೆ ದಿನದಿಂದ ದಿನಕ್ಕೆ ಹೆಚ್ಚಿನ ಜನಪ್ರಿಯತೆ ಪಡೆಯುತ್ತಿದ್ದು, ಕಂಬಳದ ಕೋಣಗಳ ಸಂಖ್ಯೆ ಹಾಗೂ ಕೋಣಗಳ ಯಜಮಾನರ ಸಂಖ್ಯೆ ಹೆಚ್ಚುತ್ತಿರುವಂತೆ ಕಂಬಳ ಓಟಗಾರರ ಸಂಖ್ಯೆಯೂ ಹೆಚ್ಚಾಗಬೇಕು ಎಂದರು.

ಕಂಬಳ ಕ್ರೀಡೆಗೆ ಹೊಸ ಪ್ರತಿಭೆಗಳನ್ನು ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಕಂಬಳ ಅಸೋಸಿಯೇಷನ್ ಕಂಬಳ ಓಟಗಾರರಿಗೆ ತರಬೇತಿ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಅವರು ಹೇಳಿದರು.

ಪ್ರಥಮ ವರ್ಷದ ಈ ತರಬೇತಿ ಶಿಬಿರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 214 ಕಂಬಳ ಓಟಗಾರರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಂಬಳ ಓಟದ ತರಬೇತಿ ಶಿಬಿರದ ಸಂರಕ್ಷಕರಾದ ಎರ್ಮಾಳ್ ರೋಹಿತ್ ಕುಮಾರ್ ಹೆಗ್ಡೆ, ಪ್ರವೀಣ್ಚಂದ್ರ ಆಳ್ವ, ಯೋಗೀಶ್ ಶೆಟ್ಟಿ, ಸಂದೀಪ್ ಶೆಟ್ಟಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಟ್ರಸ್ಟಿ ಸುನೀಲ್ ಕುಮಾರ್ ಬಜಗೋಳಿ, ಎ ಪಿ ಎಂ ಸಿ ಹಾಗೂ ಕುಕ್ಕುಂದೂರು ಪಂಚಾಯತ್ ಮಾಜಿ ಅಧ್ಯಕ್ಷ ಅಂಥೋನಿ ಡಿಸೋಜ ನಕ್ರೆ, ರಾಜ್ಯ ಕಂಬಳ ಸಮಿತಿ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ, ಶೈಲೇಶ್ ಅರಿಗ ಹಿನಪ್ಪಾಡಿ, ದಿವಾಕರ್ ಜೈನ್, ಕಿರಣ್ ಬಲಿಪ, ವಿಶ್ವನಾಥ್ ಶೆಟ್ಟಿ, ಚಂದ್ರಹಾಸ ಸಾಧು ಸನಿಲ್, ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನ ಮುಕ್ತೇಸರ ತಾರಾನಾಥ್ ಕೋಟ್ಯಾನ್, ತರಬೇತುದಾರರಾದ ಶಾಂತರಾಮ್, ವಸಂತ್ ಜೋಗಿ, ಅಶೋಕ್ ಕುಮಾರ್ ಜೈನ್ ಈದು, ದಿನೇಶ್ ಕಕ್ಕೆಪದವು, ವಿದ್ಯಾದರ್ ಉಪಸ್ಥಿತರಿದ್ದರು.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor