ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್‌ಗೆ ಪಿತೃ ವಿಯೋಗ
Update: 2025-07-17 08:34 IST
ಕಾರ್ಕಳ: ಶಾಸಕ ವಿ.ಸುನಿಲ್ ಕುಮಾರ್ ಅವರ ತಂದೆ ಕೆ. ಎಂ. ವಾಸುದೇವ (87) ಅವರು ಗುರುವಾರ ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.
ಮೃತರು ಪತ್ನಿ, ಪುತ್ರ ಸುನಿಲ್ ಕುಮಾರ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಅಪರಾಹ್ನ ಮನೆಗೆ ತಂದು, ಸಂಜೆ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ತಿಳಿದು ಬಂದಿದೆ.