×
Ad

ಕಾರ್ಕಳ: ನಿಟ್ಟೆ ಅಂತಾರಾಷ್ಟ್ರೀಯ ಕಾನ್ಫರೆನ್ಸ್ ಉದ್ಘಾಟನೆ

Update: 2026-01-09 12:07 IST

ಕಾರ್ಕಳ: ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆಶ್ರಯದಲ್ಲಿ ಅಮೆರಿಕದ ಯುನಿವರ್ಸಿಟಿ ಆಫ್ ಕನೆಕ್ಟಿಕಟ್, ಯುಎಇಯ ಅಜ್ಮಾನ್ ಹೊರೈಝನ್ ಯುನಿವರ್ಸಿಟಿ ಕಾಲೇಜು ಹಾಗೂ ಬೆಂಗಳೂರಿನ ಚಾಣಕ್ಯ ಯುನಿವರ್ಸಿಟಿ ಸಹಯೋಗದಲ್ಲಿ ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನ ಸಭಾಂಗಣದಲ್ಲಿ ನಡೆದ ನಿಟ್ಟೆ ಅಂತಾರಾಷ್ಟ್ರೀಯ ಕಾನ್ಫರೆನ್ಸ್ ಅನ್ನು ಚಾಣಕ್ಯ ಯುನಿವರ್ಸಿಟಿ ಬೆಂಗಳೂರು ನಿರ್ದೇಶಕ ಡಾ. ಪಿ.ಜಿ. ದಿವಾಕರ್ ಉದ್ಘಾಟಿಸಿದರು.

ಪೆನ್ಸಿಲ್ವೇನಿಯಾ ಯುನಿವರ್ಸಿಟಿಯ ಸ್ಕೂಲ್ ಆಫ್ ಸೋಶಿಯಲ್ ಪಾಲಿಸಿ ಅಂಡ್ ಪ್ರಾಕ್ಟೀಸ್‌ನ ಪ್ರೊ. ಡಾ. ಫೆಮಿದಾ ಹ್ಯಾಂಡಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ, ದೇಶದ ವಿವಿಧ ವಿಶ್ವವಿದ್ಯಾಲಯಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಯುಎಇ ಅಜ್ಮಾನ್ ಹೊರೈಝನ್ ಫೈನಾನ್ಸ್ ಯುನಿವರ್ಸಿಟಿಯ ಡಿಸಿಪ್ಲಿನ್ ಲೀಡರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಡಾ. ರಾಹುಲ್ ಶರ್ಮ, ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್‌ನ ಎಮೆರಿಟಸ್ ಪ್ರೊಫೆಸರ್ ಡಾ. ಎನ್.ಎಸ್. ಶೆಟ್ಟಿ, ನಿಟ್ಟೆ ಡೀಮ್ಡ್ ಯುನಿವರ್ಸಿಟಿಯ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ. ಗೋಪಾಲ್ ಮುಗೇರಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಾಂದರ್ಭಿಕವಾಗಿ ಮಾತನಾಡಿದರು.

ನಿಟ್ಟೆ ಡೀಮ್ಡ್ ಯುನಿವರ್ಸಿಟಿಯ ಉಪಕುಲಪತಿ ಡಾ. ಎಂ.ಎಸ್. ಮೂಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದೇಶ-ವಿದೇಶಗಳ ವಿವಿಧ ವಿಶ್ವವಿದ್ಯಾಲಯಗಳ ಆಯ್ದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನ ಪ್ರೊ. ಡಾ. ಟಿ. ಮಲ್ಲಿಕಾರ್ಜುನಪ್ಪ ಪ್ರಸ್ತಾವನೆಗೈದರು. ಪ್ರೊ. ಡಾ. ಸುಧೀರ್ ಎಂ. ಸ್ವಾಗತಿಸಿ, ಪ್ರೊ. ರಾಕೇಶ್ ಶೆಟ್ಟಿ ಧನ್ಯವಾದ ಅರ್ಪಿಸಿದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News