×
Ad

ಕಾರ್ಕಳ : ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ

Update: 2025-12-24 12:15 IST

ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ವತಿಯಿಂದ ನಡೆಯಲಿರುವ ಕಾರ್ಕಳ ತಾಲೂಕು ಇಪ್ಪತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನ ಡಿ.28 ರಂದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ.

ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹಿರಿಯ ಸಾಹಿತಿ ಪತ್ರಕರ್ತ ಸಿದ್ಧಾಪುರ ವಾಸುದೇವ ಭಟ್ಟ ಇವರು ವಹಿಸಲಿರುವರು. ಈ ಗೌರವಾರ್ಥ ಕಾರ್ಕಳ ಕಸಾಪ ಸಾಹಿತ್ಯ ಪರಿಷತ್ತಿನ ಸದಸ್ಯರು ಅಧ್ಯಕ್ಷರ ಮನೆಗೆ ಭೇಟಿ ನೀಡಿ ಆಮಂತ್ರಣ ಮತ್ತು ಫಲಪುಷ್ಪಗಳನ್ನು ನೀಡಿ ಗೌರವಿಸಿದರು. ಅಂತೆಯೇ ಸಮ್ಮೇಳನ ಅಧ್ಯಕ್ಷತೆಯನ್ನು ವಹಿಸಿ ಯಶಸ್ವಿಗೊಳಿಸುವಂತೆ ಕೇಳಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಕಾರ್ಕಳ ಕಸಾಪ ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ,  ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ರಂಗ ಸಂಸ್ಕೃತಿ ಅಧ್ಯಕ್ಷ ನಿತ್ಯಾನಂದ ಪೈ, ಜಿಲ್ಲಾ ಪ್ರತಿನಿಧಿ ನರಸಿಂಹ ಮೂರ್ತಿ, ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು, ಪರಿಷತ್ತು ಸದಸ್ಯರಾದ ಡಾ. ಸುಮತಿ, ಸುಲೋಚನಾ ಬಿ ವಿ, ಡಾ. ಮಾಲತಿ ಪೈ ಹಾಗೂ ಸಮ್ಮೇಳನಾಧ್ಯಕ್ಷರ ಮನೆಯವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News