ಕಾರ್ಕಳ | ಕಾರು ಢಿಕ್ಕಿ : ಪಾದಚಾರಿ ಮೃತ್ಯು
Update: 2025-12-12 01:21 IST
ಸಾಂದರ್ಭಿಕ ಚಿತ್ರ
ಕಾರ್ಕಳ, ಡಿ.11: ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟ ಘಟನೆ ಕಾರ್ಕಳದ ಕುಕ್ಕುಂದೂರಿನಲ್ಲಿ ಬುಧವಾರ ಸಂಜೆ ನಡೆದಿದೆ.
ಮೃತರನ್ನು ದಿನಕರ ಪೂಜಾರಿ (50) ಎಂದು ಗುರುತಿಸಲಾಗಿದೆ.
ಅವರು ಬುಧವಾರ ಸಂಜೆ ಜಾರ್ಕಳ ಕಡೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಉಡುಪಿ ಕಡೆಗೆ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿತ್ತು. ತಲೆಗೆ ತೀವ್ರ ವಾಗಿ ಗಾಯಗೊಂಡ ದಿನಕರ ಪೂಜಾರಿ ಚಿಕಿತ್ಸೆಗೆ ಕಾರ್ಕಳ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.