×
Ad

ಕಾರ್ಕಳ: ರಾ. ಆರೋಗ್ಯ ಕಾರ್ಯಕ್ರಮದ ಅರಿವು

Update: 2023-10-19 19:58 IST

ಉಡುಪಿ: ಐಇಸಿ ಎಸ್‌ಬಿಸಿಸಿ ಕಾರ್ಯಕ್ರಮದಡಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಎನ್ನೆಸ್ಸೆಸ್, ಎನ್‌ಸಿಸಿ, ರೇಂಜರ್ಸ್‌, ರೋವರ್ಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರತಿನಿಧಿಗಳಿಗೆ ಅರಿವು ಮೂಡಿಸುವ ಕಾರ್ಯಗಾರ ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ.ಅರುಣ ಕಾರ್ಯಕ್ರಮ ಉದ್ಘಾಟಿಸಿ, ಎನ್‌ಸಿಸಿ, ಎನ್ನೆಸ್ಸೆಸ್, ಸಂಘ ಸಂಸ್ಥೆಗಳ ಪ್ರತಿನಿಧಿ ಗಳು ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಿ, ಅವುಗಳನ್ನು ಸಮುದಾಯಕ್ಕೆ ತಲುಪಿಸುವ ಜವಾಬ್ದಾರಿ ನಿಭಾಯಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದರು.

ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಗಳ ಬಗ್ಗೆ, ಆರೋಗ್ಯ ಮಿತ್ರ ಚೇತನ್ ಪ್ರಭು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಚಂದ್ರಾವತಿ, ರೇಂಜರ್ ಪ್ರತಿನಿಧಿ ಸೌಮ್ಯಾ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಅಧಿಕಾರಿ ಪ್ರಸನ್ನ ಸ್ವಾಗತಿಸಿ, ಸಂಧ್ಯಾ ಭಂಡಾರಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News