ಕಾರ್ಕಳ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ
Update: 2024-08-26 23:52 IST
ಅತ್ಯಾಚಾರ ಆರೋಪಿ ಅಭಯ್ (ಚಿತ್ರ: ಅಭಯ್ ನ ಫೇಸ್ ಬುಕ್ ಪೇಜ್ ನಿಂದ)
ಕಾರ್ಕಳ: ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ, ಕಾರ್ಕಳ ತೆಲ್ಲರು ನಿವಾಸಿ ಅಭಯ್ ಶಾಸಕ ಸುನೀಲ್ ಕುಮಾರ್ ಅವರ ಭಕ್ತ, ಬಿಜೆಪಿ ಕಾರ್ಯಕರ್ತ, ಭಜರಂಗದಳ ಕಾರ್ಯಕರ್ತನೂ ಆಗಿದ್ದಾನೆ ಎಂದು ತಿಳಿದುಬಂದಿದೆ.
ಈತ ಕಾಪುವಿನ ವ್ಯಕ್ತಿಯೊಂದಿಗೆ ಸೇರಿಕೊಂಡು ಟಿಪ್ಪರ್ ಖರೀದಿಸಿದ್ದ ಆದರೆ ಲೋನ್ ಕಂತು ಬಾಕಿ ಇರಿಸಿದ್ದ ಕಾರಣ ಆತನ ವಾಹನವನ್ನು ಫೈನಾನ್ಸ್ ಕಂಪನಿ ಮುಟ್ಟುಗೋಲು ಹಾಕಿಕೊಂಡ ನಂತರ ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.
ಅಲ್ತಾಫ್ ಹಾಗೂ ಅಭಯ್ ಇಬ್ಬರೂ ಕಾರ್ಕಳ ಜೋಡುರಸ್ತೆ ಬಳಿ ಟಿಪ್ಪರ್ ನಿಲ್ಲಿಸುತ್ತಿದ್ದರು. ಇವರಿಬ್ಬರ ಮಧ್ಯೆ ಸ್ನೇಹ ಬೆಳೆದಿತ್ತು, ಇವರಿಬ್ಬರೂ ಒಟ್ಟಿಗೆ ತಿರುಗಾಡುತ್ತಿದ್ದಾರೆಂದು ಸಾರ್ವಜನಿಕರು ತಿಳಿಸಿದ್ದಾರೆ.