ಅಜೆಕಾರು, ನ.22: ಕ್ರೇನೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ದೊಡ್ಡಪಲ್ಕೆ ಕ್ರಾಸ್ ಬಳಿ ನ.21ರಂದು ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಲೊಕೇಶ ಕುಲಾಲ್ ಎಂದು ಗುರುತಿಸಲಾಗಿದೆ. ಅಂಡಾರು ಕಡೆಯಿಂದ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಅಜೆಕಾರು ಕಡೆಗೆ ಹೋಗುತ್ತಿದ್ದ ಕ್ರೇನ್ ಅಜೆಕಾರು ಕಡೆಯಿಂದ ಅಂಡಾರು ಕಡೆಗೆ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಇದರಿಂದ ಸವಾರ ಬೈಕ್ ಸಮೇತ ರಸ್ತೆಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿಮಧ್ಯೆ ಕೊನೆಯುಸಿಳೆದರು ಎಂದು ತಿಳಿದು ಬಂದಿದೆ.

ಅಪಘಾತ ನಡೆಸಿದ ಕ್ರೇನ್ ಚಾಲಕ ಕ್ರೆನ್ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಲಾಗಿದೆ.

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ನಝೀರ್ ಪೂಲ್ಯ

contributor