ಉಡುಪಿ, ನ.25: ಕಾರ್ಕಳ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವದ ನಿಮಿತ್ತ ನಡೆಯುವ ಕಾರ್ಯಕ್ರಮದ ಪ್ರಯುಕ್ತ ನ. 27ರಿಂದ 29ರವರೆಗೆ ಕಾರ್ಕಳ ಮೂರು ಮಾರ್ಗದಿಂದ ಸ್ಟೇಟ್‌ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.

ನ.27ರಂದು ಬಂಡಿಯಲ್ಲಿ ಗರುಡ ವಾಹನ ಉತ್ಸವ, ಕೆರೆದೀಪ ಪ್ರಯುಕ್ತ ಅಂದು ಸಂಜೆ 6 ಗಂಟೆಯಿಂದ ರಾತ್ರಿ 11ರವರೆಗೆ ಘನ ವಾಹನಗಳು ಬಂಗ್ಲೆಗುಡ್ಡೆಯಿಂದ ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ ನಿಂದ ಕಲ್ಲೊಟ್ಟೆ-ಮಾರ್ಕೇಟ್ ಮಾರ್ಗವಾಗಿ ಬಸ್‌ನಿಲ್ದಾಣ ಪ್ರವೇಶಿಸಬೇಕು ಹಾಗೂ ಸ್ಟೇಟ್‌ಬ್ಯಾಂಕ್ ಜಂಕ್ಷನ್‌ನಿಂದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ ವರೆಗಿನ ಮಾರ್ಗದಲ್ಲಿ ದ್ವಿ-ಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು.

ನ.28ರಂದು ಲಕ್ಷದೀಪೋತ್ಸವ ವನಭೋಜನ ಉತ್ಸವ ಇರುವುದರಿಂದ ಅಂದು ಬೆಳಗ್ಗೆ 10ರಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ನ. 29ರಂದು ಓಕುಳಿ ಹಾಗೂ ಪಲ್ಲಕ್ಕಿ ಉತ್ಸವ ಇರುವುದರಿಂದ ಅಂದು ಸಂಜೆ 4 ಗಂಟೆ ಯಿಂದ ಮರುದಿನ ಮುಂಜಾನೆ 4 ಗಂಟೆಯವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿಂದ ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿಂದ ಕಲ್ಲೊಟ್ಟೆ ಮಾರ್ಕೆಟ್ ಮಾರ್ಗವಾಗಿ ಬಸ್‌ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿಂದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್‌ವರೆಗಿನ ಮಾರ್ಗದಲ್ಲಿ ದ್ವಿಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor