ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Update: 2026-07-17 20:30 IST

ಉಡುಪಿ, ಜು.17: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಜುಲೈ ಆವೃತ್ತಿಯಲ್ಲಿ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ. ಬಿ.ಎಸ್.ಡಬ್ಲೂ, ಬಿ.ಲಿಬ್. ಐ.ಎಸ್.ಸ್ಸಿ. ಮತ್ತು ಎಲ್ಲಾ ಬಿ.ಎಸ್ಸಿ, ಸ್ನಾತಕೋತ್ತರ ಪದವಿಗಳಾದ ಎಂ.ಎ /ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಎಂ.ಲಿಬ್ ಐ.ಎಸ್.ಸ್ಸಿ ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು ಮತ್ತು ಡಿಪ್ಲೋಮಾ, ಪಿ.ಜಿ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶವು ಆರಂಭವಾಗಿದ್ದು, ಆಸಕ್ತರು ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಜೈನ, ಭೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮಿತಿ ಇರುವವರು ಅಗತ್ಯ ದಾಖಾಲಾತಿ ಒದಗಿಸಿದಲ್ಲಿ ಉಚಿತ ಪ್ರವೇಶಾತಿಗೆ ಅವಕಾಶವಿರುತ್ತದೆ.

ಈ ಕುರಿತು ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ - www.ksoumysuru.ac.in- ಅನ್ನು ಅಥವಾ ಮೊ.ನಂ: 8197818807, 8970636111, 8431406150 ಹಾಗೂ 9449499139ನ್ನು ಸಂಪರ್ಕಿ ಸಬಹುದು ಎಂದು ಕೆ.ಎಸ್.ಓ.ಯು ಉಡುಪಿ ಪ್ರಾದೇಶಿಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News