×
Ad

ಕಟಪಾಡಿ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸನ್ಮಾನ

Update: 2023-09-22 20:03 IST

ಉಡುಪಿ, ಸೆ.22: ಕಾಪು ತಾಲೂಕಿನ ಪಡುಕುತ್ಯಾರುವಿನಲ್ಲಿರುವ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಕ್ಕೆ ಇಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದರು.

ಮಹಾಸಂಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಸಚಿವರನ್ನು ಆಶೀರ್ವದಿಸಿದರು.

ಇದೇ ಸಂದರ್ಭದಲ್ಲಿ ಶ್ರೀಮಠದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು. ಈ ವೇಳೆ ಪ್ರತಿಷ್ಠಾನದ ಅಧ್ಯಕ್ಷ ವಡೇರ ಹೊಬಳಿ ಶ್ರೀಧರ ಆಚಾರ್ಯ, ಹಳೆಯಂಗಡಿ ಸೂರ್ಯಕುಮಾರ್ ಸೇರಿದಂತೆ ಮಠದ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News