ಕಾಪು: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಪಲ್ಟಿ; ಏಳುಮೀನುಗಾರರ ರಕ್ಷಣೆ
Update: 2025-08-04 14:00 IST
ಸಾಂದರ್ಭಿಕ ಚಿತ್ರ
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ಕಾಪು ತಾಲೂಕಿನ ಲೈಟ್ ಹೌಸ್ ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ದೋಣಿಯಲ್ಲಿದ್ದ 7 ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.
ಆಂಧ್ರ ಮೂಲದ ಏಳು ಮಂದಿ ಮೀನುಗಾರರನ್ನು ಹೊಂದಿದ್ದ ಟ್ರಾಲ್ ಬೋಟ್ ಕಾಪು ಬೀಚ್‍ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ದೋಣಿಯಲ್ಲಿದ್ದ ಎಲ್ಲಾ ಮೀನುಗಾರರನ್ನು ಸ್ಥಳೀಯ ಮೀನುಗಾರರಾದ ಪ್ರಶಾಂತ್ ಮತ್ತು ವಿನೋದ್ ರಕ್ಷಣೆ ಮಾಡಿದ್ದು, ಪ್ರಥಮ ಚಿಕಿತ್ಸೆ ನೀಡಿ ಕೊಡಿಸಲಾಗಿದೆ.
ಹೀಗಾಗಿ ಜಿಲ್ಲೆಯಲ್ಲಿ ಮತ್ತೊಂದು ದುರಂತ ತಪ್ಪಿದಂತಾಗಿದೆ.