ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ಅವರನ್ನು ನೇಮಕ ಮಾಡಿ AICC ಬುಧವಾರ ಆದೇಶ ಹೊರಡಿಸಿದೆ.

AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು ಈ ಹಿಂದೆ ಕಿಶನ್ ಹೆಗ್ಡೆ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಿಶನ್ ಹೆಗ್ಡೆ ಅವರನ್ನು ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಬಳಿಕ ತಡೆಹಿಡಿಯಲಾಗಿತ್ತು. ಇತ್ತೀಚೆಗೆ ಎಐಸಿಸಿ ವೀಕ್ಷಕರನ್ನು ನೇಮಿಸಿ ಪ್ರತಿ ಜಿಲ್ಲೆಯಲ್ಲಿ ಸಂಘಟನ್ ಅಭಿಯಾನ್ ಕಾರ್ಯಕ್ರಮದ ಅಡಿಯಲ್ಲಿ ನಾಯಕರ ಅಭಿಪ್ರಾಯ ಸಂಗ್ರಹ ಮಾಡಿದ್ದು ವೀಕ್ಷಕರು ವರಿಷ್ಠರಿಗೆ ವರದಿ ಸಲ್ಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor