ಕೋಡಿ: ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯಕ್ಕೆ ದ್ವಿತೀಯ ರ‍್ಯಾಂಕ್
Update: 2026-03-06 19:55 IST
ಅನುಪಮಾ
ಕುಂದಾಪುರ, ಮಾ.6: ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ 2022-24ನೇ ಶೈಕ್ಷಣಿಕ ಸಾಲಿನ ಪ್ರಶಿಕ್ಷಣಾರ್ಥಿಯಾದ ಅನುಪಮಾ ಸಿ.ಶೆಟ್ಟಿ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಫೆಬ್ರವರಿ 2025ರಲ್ಲಿ ನಡೆಸಲ್ಪಟ್ಟ ಬಿ.ಎಡ್ ವಾರ್ಷಿಕ ಪರೀಕ್ಷೆಯಲ್ಲಿ ಶೇ.92.79 ಅಂಕ ಗಳಿಸುವ ಮೂಲಕ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.
ಇವರ ಅಮೋಘ ಶೈಕ್ಷಣಿಕ ಸಾಧನೆಯನ್ನು ಪ್ರಶಂಶಿಸಿ ಬ್ಯಾರಿಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಎಂ.ಅಬ್ದುಲ್ ರೆಹಮಾನ್ ಬ್ಯಾರಿ, ಸಂಚಾಲಕ ಸಯ್ಯದ್ ಮೊಹಮ್ಮದ್ ಬ್ಯಾರಿ, ಟ್ರಸ್ಟಿಗಳಾದ ಡಾ.ಆಸೀಫ್ ಬ್ಯಾರಿ, ನಿರ್ದೇಶಕಿ ಅಶ್ವಿನಿ ಶೆಟ್ಟಿ, ಪ್ರಾಂಶುಪಾಲೆ ಡಾ.ಫಿರ್ದೋಸ್, ಉಪಪ್ರಾಂಶುಪಾಲ ಪ್ರವೀಣ್ ಕುಮಾರ್ ಕೆ.ಪಿ., ಪ್ರಾಧ್ಯಾಪಕ ವೃಂದ, ಬೋಧಕೇತರ ವೃಟದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.