ಕುಂದಾಪುರ: ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿ ಹಬ್ಬಕ್ಕೆಂದು ಬಂದಿದ್ದ ಮಹಿಳೆಯೊಬ್ಬರ 7 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನ ಕಳವುಗೈದ ಘಟನೆ ನ.24 ರ ಮಧ್ಯಾಹ್ನ ಸಂಭವಿಸಿದೆ.

ಜಪ್ತಿ ಗ್ರಾಮದ ಗೀತಾ ಬಿ. (51) ಅವರು ನ.24ರ ಬೆಳಗ್ಗೆ 11.30 ಕ್ಕೆ ದೇವರ ದರ್ಶನ ಮಾಡಿ, ಮಧ್ಯಾಹ್ನ 12.30 ರ ಸುಮಾರಿಗೆ ದೇವಸ್ಥಾನದ ಪೌಳಿಯ ಹೊರ ಭಾಗದಲ್ಲಿ ಜನ ಜಂಗುಳಿ ಇರುವ ಊಟದ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಯಾರೋ ಅಪರಿಚಿತ ವ್ಯಕ್ತಿಗಳು ಇವರ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಎಳೆದುಕೊಂಡು ಹೋಗಿ ದ್ದಾರೆ. ಕಳವಾದ ಚಿನ್ನದ ಕರಿಮಣಿಯ ಮೌಲ್ಯ ಅಂದಾಜು 6 ಲಕ್ಷ ರೂ. ಎಂದು ತಿಳಿದು ಬಂದಿದೆ.

ಘಟನೆ ಬಳಿಕ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಶಂಕಿತ ವ್ಯಕ್ತಿಗಳ ಚಲನವಲನದ ಬಗ್ಗೆ ಮಾಹಿತಿ ಕಲೆ ಹಾಕಿದ್ದು ತನಿಖೆ ಮುಂದುವರೆಸಿದ್ದಾರೆ.

ಗೀತಾ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor