ಕುಂದಾಪುರ : ಕೋಟೇಶ್ವರ ಜೋಗಿ ವಿವಿದ್ದೋದ್ಧೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಕಟ್‌ಬೆಲ್ತೂರಿನ ಮೃತರನ್ನು ರಾಘವೇಂದ್ರ ಜೋಗಿ(48) ಎಂದು ಗುರುತಿಸಲಾಗಿದೆ. ಇವರು ಕಳೆದ 18 ವರ್ಷಗಳಿಂದ ಜೋಗಿ ವಿವಿದ್ದೋದ್ಧೇಶ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ಮಾಡಿ ಕೊಂಡಿದ್ದು, ಇವರು ಮನೆಯಲ್ಲಿ  ಡೆತ್ ನೋಟ್ ಬರೆದಿಟ್ಟು, ಸೆ.24ರಂದು ಮಧ್ಯಾಹ್ನ ವೇಳೆ ಮನೆಯ ಸಮೀಪ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಯಾವುದೋ ವೈಯಕ್ತಿಕ ಸಮಸ್ಯೆಯಿಂದ ಅಥವಾ ಇನ್ಯಾವುದೋ ವಿಚಾರದಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor