×
Ad

ಕುಂದಾಪುರ ಬನ್ಸ್ ರಾಘು ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Update: 2023-10-09 15:06 IST

ಕುಂದಾಪುರ, ಅ.9: ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್ (42) ಅಲಿಯಾಸ್ ಬನ್ಸ್ ರಾಘು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಶಿವಮೊಗ್ಗ ಜಿಲ್ಲೆಯವರಾದ ಶಫೀವುಲ್ಲ ಅಲಿಯಾಸ್ ಆಟೋ ಶಫಿ(40), ಮುಹಮ್ಮದ್ ಇಮ್ರಾನ್ (43) ಬಂಧಿತ ಆರೋಪಿಗಳಾಗಿದ್ದಾರೆ.

ಕುಂದಾಪುರದ ಚಿಕನ್ ಸ್ಟಾಲ್ ರಸ್ತೆಯ ಅಂಚೆ ಕಚೇರಿ ಸಮೀಪದ ಡೆಲ್ಲಿ ಬಜಾರ್ ಬಳಿ ಅ.1ರಂದು ಸಂಜೆ ಕ್ಷುಲ್ಲಕ ವಿಚಾರಕ್ಕೆ ಬನ್ಸ್ ರಾಘುರನ್ನು ಚೂರಿಯಿಂದ ಇರಿದು ಕೊಲೆಗೈಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಅ.5ರಂದು ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಬಂಧಿಸಿದ್ದ ಪೊಲೀಸರು ಅ.6ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಸೋಮವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಆರೋಪಿಗಳ ಕಾರು ಮತ್ತು ಬನ್ಸ್ ರಾಘು ಕಾರಿಗೆ ತಾಗಿದ ವಿಚಾರಕ್ಕೆ ಗಲಾಟೆಯಾಗಿದ್ದು, ಈ ವೇಳೆ ಆರೋಪಿಗಳು ರಾಘವೇಂದ್ರ ಶೇರಿಗಾರ್ ಅವರ ತೊಡೆಗೆ ಇರಿದ ಪರಿಣಾಮ ವಿಪರೀತ ರಕ್ತಸ್ರಾವವಾಗಿ ಮೃತಪಟ್ಟಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News