×
Ad

ಕುಂದಾಪುರ: ಅಗ್ನಿ ದುರಂತ; ಹಲವು ಅಂಗಡಿಗಳು ಸುಟ್ಟು ಭಸ್ಮ

Update: 2025-12-29 08:13 IST

ಕುಂದಾಪುರ: ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡವೊಂದರಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಹಲವು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ವರದಿಯಾಗಿದೆ.

ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡ ಮಾಹಿತಿ ಇದ್ದು, ಬಳಿಕ ಅದು ಪುಸ್ತಕದಂಗಡಿ ಸೇರಿದಂತೆ ಐರಾರು ಅಂಗಡಿಗಳಿಗೆ ವೇಗವಾಗಿ ಹಬ್ಬಿದೆ ಎನ್ನಲಾಗಿದೆ.

ಸೋಮವಾರ ಮುಂಜಾನೆ ಮೂರು ಗಂಟೆಗೆ ಘಟನೆ ನಡೆದಿದ್ದು, ಕುಂದಾಪುರ ಪೇಟೆಯ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಸಹಕರಿಸುತ್ತಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳು ನಾಶವಾಗಿವೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News