×
Ad

ಕುಂದಾಪುರ | ಹೆಜ್ಜೇನು ದಾಳಿ: ಐವರಿಗೆ ಗಂಭೀರ ಗಾಯ

Update: 2024-11-26 11:53 IST

ಕುಂದಾಪುರ: ಹೆಜ್ಜೇನು ದಾಳಿಯಿಂದ ಐವರು ಗಂಭೀರ ಗಾಯಗೊಂಡ ಘಟನೆ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರಿನಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಕಲ್ಲು ಕೆಲಸದ ಮೇಸ್ತ್ರಿ ಹಾಜಿ ಇಬ್ರಾಹೀಂ ಪಾರಂಪಳ್ಳಿ, ಕಾರ್ಮಿಕರಾದ ಮುಹಮ್ಮದ್ ಪಾರಂಪಳ್ಳಿ, ಪ್ರಭಾಕರ, ಶೇಖರ್ ಪೂಜಾರಿ ಹೆಜ್ಜೇನು ದಾಳಿಗೊಳಗಾದವರು.

ಕೋಟ ಮಣೂರಿನಲ್ಲಿ ಕಾಂಪೌಂಡ್ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ಹಿಂಡು ಏಕಾಏಕಿ ದಾಳಿ ನಡೆಸಿದೆ. ಜೇನು ನೊಣಗಳ ಕಡಿತದಿಂದ ತಪ್ಪಿಸಿಕೊಂಡು ಐವರು ರಸ್ತೆಗೆ ಓಡಿ ಬಂದಿದ್ದರಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಗಂಭೀರ ಗಾಯಗೊಂಡವರನ್ನು ತಕ್ಷಣ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News