×
Ad

ಕುಂದಾಪುರ: ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾದ ಕೋಟ ಶ್ರೀನಿವಾಸ ಪೂಜಾರಿ

Update: 2024-03-15 14:30 IST

ಕುಂದಾಪುರ: ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದರು.

ಬುಧವಾರ ಸಂಜೆ ವೇಳೆ ಬಿಡುಗಡೆಯಾದ ಎರಡನೇ ಪಟ್ಟಿಯಲ್ಲಿ ಕೋಟ ಅವರ ಹೆಸರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಅಂತಿಮವಾಗಿತ್ತು. ಈ ಮೊದಲು ಕ್ಷೇತ್ರಕ್ಕೆ ಹಾಲಿ ಸಂಸದೆ ಹಾಗೂ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, ಪ್ರಮುಖರಾದ ಸಿ.ಟಿ. ರವಿ, ಪ್ರಮೋದ್ ಮಧ್ವರಾಜ್ ಹೆಸರು ಮುನ್ನಲೆಯಲ್ಲಿ ಕೇಳಿಬಂದಿತ್ತು. ಅಚ್ಚರಿಯ ಬೆಳವಣಿಗೆಯಲ್ಲಿ ಕೋಟ ಹೆಸರು ಫೈನಲ್ ಆಗಿದ್ದು ಕೋಟ ಶ್ರೀನಿವಾಸ ಪೂಜಾರಿ ಕ್ಷೇತ್ರದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡುತ್ತಿದ್ದಾರೆ.

ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ಕೋಟ ಅವರು, 'ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಅತ್ಯಂತ ಸರಳ ವ್ಯಕ್ತಿತ್ವದ ಮೇರು ನಾಯಕರಾದ ಗೌರವಾನ್ವಿತ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದೆ. ಈ ಬಾರಿ ಮತ್ತೊಮ್ಮೆ ದಾಖಲೆಯ ಅಂತರದಿಂದ ಗೆಲುವು ಸಾಧಿಸುವಲ್ಲಿ ಸಹಕಾರ ನೀಡುವ ಭರವಸೆ ನೀಡಿದರು' ಎಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News