×
Ad

ಕುಂದಾಪುರ: ರೈಲು ಢಿಕ್ಕಿ ಹೊಡೆದು ಚಿರತೆ ಸಾವು

Update: 2024-10-10 11:35 IST

ಕುಂದಾಪುರ: ರೈಲು ಢಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೆ ಮೇಲ್ಸೇತುವೆಯಲ್ಲಿ ಬುಧವಾರ ಸಂಭವಿಸಿದೆ.

ಐದು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು, ಈ ಭಾಗದಲ್ಲಿ ಅರಣ್ಯ ಪ್ರದೇಶ ಹಾಗೂ ಗೇರು ಪ್ಲಾಂಟೇಶನ್ ಇರುವ ಕಾರಣ ಕಾಡಿನಿಂದ ಆಹಾರ ಅರಸಿಕೊಂಡು ಬಂದಿರಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ವೇ ಹಳಿ ದಾಟುವಾಗ ಈ ಅವಘಡ ಸಂಭವಿಸಿರಬಹುದು ಎನ್ನಲಾಗಿದೆ.

ಬುಧವಾರ ಬೆಳಗ್ಗೆ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಎಸಿಎಫ್ ಪ್ರಕಾಶ್ ಪೂಜಾರಿ, ಕುಂದಾಪುರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯ್ಕ, ಡಿಆರ್ಎಫ್ಒ ಮುರುಗನ್, ಬೀಟ್ ಫಾರೆಸ್ಟರ್ ರಾಮಪ್ಪ ಹಾಗೂ ಸಿಬಂದಿ ಚಿರತೆಯ ಕಳೇಬರ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಬಳಿಕ ಕುಂದಾಪುರ ವಲಯ ಅರಣ್ಯ ಇಲಾಖೆಯ ವಂಡ್ಸೆ ಡಿಪ್ಪೋದಲ್ಲಿ ಚಿರತೆಯ ಅಂತ್ಯ ಸಂಸ್ಕಾರ ನಡೆಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News