ಕುಂದಾಪುರ: ಖಾಸಗಿ ಬಸ್- ಬೈಕ್ ಮುಖಾಮುಖಿ ಢಿಕ್ಕಿ; ಸವಾರ ಮೃತ್ಯು
Update: 2026-01-24 13:27 IST
ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.
ಸೌಕೂರು ನಿವಾಸಿ ವಿಜಯ್ (36) ಮೃತ ಯುವಕ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್, ಶನಿವಾರ ಬೆಳಿಗ್ಗೆ ಆಹಾರ ವಸ್ತುಗಳನ್ನು ಖರೀದಿಸಿ ಬೈಕಿನಲ್ಲಿ ತಲ್ಲೂರು ಮೂಲಕ ಸೌಕೂರು ಕಡೆಗೆ ಮರಳುತ್ತಿದ್ದಾಗ ಘಟನೆ ನಡೆದಿದೆ.
ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್‌ವೊಂದನ್ನು ಓವರ್ ಟೇಕ್ ಮಾಡುವಾಗ ಎದುರಿನಿಂದ ಬಂದ ಇನ್ನೊಂದು ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿಜಯ್‌ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.