ಕುಂದಾಪುರ | ಬೈಂದೂರು ಸರ್ಕಲ್ ಇನ್‌ಸ್ಪೆಕ್ಟರ್ ಆಗಿ ಶಿವಕುಮಾರ್ ಅಧಿಕಾರ ಸ್ವೀಕಾರ
Update: 2025-12-11 19:29 IST
ಕುಂದಾಪುರ, ಡಿ.11: ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕರಾಗಿದ್ದ ಶಿವಕುಮಾರ್ ಅವರನ್ನು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾಗಿ ಡಿ.3 ರಂದು ವರ್ಗಾವಣೆ ಮಾಡಿದ್ದು, ಗುರುವಾರ ಅವರು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಬಂಟ್ವಾಳಕ್ಕೂ ಮುನ್ನ ಅವರು ಬೆಳ್ತಂಗಡಿ ಪೊಲೀಸ್ ನಿರೀಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು.