×
Ad

ಕುಂದಾಪುರ: ಟೇಬಲ್‌ಟೆನಿಸ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Update: 2023-09-02 22:00 IST

ಕುಂದಾಪುರ, ಸೆ.2: ಉಡುಪಿಯ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ಟೇಬಲ್ ಟೆನಿಸ್ ತಂಡ ಪ್ರಥಮ ಸ್ಥಾನವನ್ನು ಪಡೆದಿದೆ.

ತಂಡದಲ್ಲಿ ದೀಪ್ತಿ ಕೆ, ಸಿಂಚನಾ ಶೆಟ್ಟಿ, ಕ್ಷಮಾ ಗೌತಮ್, ಅಂಕಿತಾ, ಭಾರ್ಗವಿ ಇವರು ಆಟಗಾರರಾಗಿ ಭಾಗವಹಿಸಿದ್ದರು. ಇವರಲ್ಲಿ ಮೂವರು ವಿದ್ಯಾರ್ಥಿನಿಯರಾದ ಅಂಕಿತಾ, ಕ್ಷಮಾ ಗೌತಮ್ ಹಾಗೂ ದೀಪ್ತಿ ಇವರು ರಾಜ್ಯಮಟ್ಟದಲ್ಲಿ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಗಾಗಿ, ಕಾಲೇಜಿನ ಸಂಚಾಲಕ ಬಿ. ಎಂ. ಸುಕುಮಾರ್ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಪ್ರಾಂಶುಪಾಲ ಅಭಿನಂದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News