×
Ad

ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ

Update: 2024-08-17 18:35 IST

ಕುಂದಾಪುರ: ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಶನಿವಾರ ವರದಿಯಾಗಿದೆ.

ಕೆಲ ತಿಂಗಳ ಹಿಂದಷ್ಟೇ 7 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ದಾರಗೊಂಡಿದ್ದ ಈ ದೇವಸ್ಥಾನದಲ್ಲಿ ಅಂದಾಜು ಸುಮಾರು 40 ಸಾವಿರಕ್ಕೂ ಅಧಿಕ ನಗದು ಕಳ್ಳತನ ಆಗಿದೆ ಎಂದು ತಿಳಿದು ಬಂದಿದೆ.

ಬಾಗಿಲ ಚಿಲಕದ ಸ್ಕ್ರೂ ತೆಗೆದು ಸುತ್ತು ಪೌಳಿ ಪ್ರವೇಶಿಸಿದ ಕಳ್ಳ, ತಿಂಗಳ ಸತ್ಯನಾರಾಯಣ ಪೂಜೆಗಾಗಿ ಸಂಗ್ರಹಿಸಿದ ಹಣವನ್ನು ಎಗರಿಸಿದ್ದಾನೆ. ಚಪ್ಪಲಿ ಹಾಕಿಕೊಂಡೆ‌ ದೇವಸ್ಥಾನ ಪ್ರವೇಶಿಸಿ ದೇವರಿಗೆ ಕೈ ಮುಗಿದು, ಹಣೆಗೆ ತಿಲಕವಿಟ್ಟುಕೊಂಡ ಬಳಿಕ ಕಳ್ಳತನ ಕೃತ್ಯ ನಡೆಸಿದ್ದು, ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಕಳ್ಳನ‌ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನಾ ಸ್ಥಳಕ್ಕೆ ಕುಂದಾಪುರ ಪ್ರಭಾರ ವೃತ್ತನಿರೀಕ್ಷಕ ಜಯರಾಮ ಡಿ. ಗೌಡ, ಪ್ರಭಾರ ಪಿಎಸ್ಐ ನೂತನ ಗೌಡ, ಸಿಬ್ಬಂದಿ ಭೇಟಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News