ಕುಂದಾಪುರ | ಗೋಪಾಲ ಶೆಟ್ಟಿಗಾರ್ ನಿಧನ

Update: 2026-08-07 12:35 IST

ಕುಂದಾಪುರ: ಕಮ್ಯುನಿಸ್ಟ್ ಪಕ್ಷದ ಸದಸ್ಯ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗೋಪಾಲ ಶೆಟ್ಟಿಗಾರ್(76) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.

ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಸದಸ್ಯರು ಹಾಗೂ ಬಸ್ರೂರು ಹಾಲು ಉತ್ಪಾದಕರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಗೋಪಾಲ ಶೆಟ್ಟಿಗಾರ್, ಪಕ್ಷ ಹಾಗೂ ಜನಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, ಪುತ್ರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಗೋಪಾಲ ಶೆಟ್ಟಿಗಾರ್ ನಿಧನಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಉಡುಪಿ ಜಿಲ್ಲಾ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News