ಕುಂದಾಪುರ| ಪತ್ರಕರ್ತನಿಗೆ ಹಲ್ಲೆ ಪ್ರಕರಣ: ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು

Update: 2026-08-21 20:03 IST

ಡಾ. ಮಹೇಂದ್ರ ಕುಮಾರ್ ಶೆಟ್ಟಿ

ಉಡುಪಿ, ಆ.21: ಉಡುಪಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಶ್ರೀಕಾಂತ್ ಹೆಮ್ಮಾಡಿ ಮೇಲೆ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ ಹಲ್ಲೆ ನಡೆಸುವ ಮೂಲಕ ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿದ ಆಯುಕ್ತ ಗುರುದತ್ತ ಹೆಗಡೆ, ಮಹೇಂದ್ರ ಕುಮಾರ್ ವಿರುದ್ಧದ ಕರ್ತವ್ಯ ಲೋಪ ಮತ್ತು ಬೇಜವಾಬ್ದಾರಿತನ ಆರೋಪಗಳ ಕುರಿತು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ. 




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News