×
Ad

ಕುತ್ಪಾಡಿ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಪದವಿ ಪ್ರದಾನ

Update: 2023-08-31 19:30 IST

ಉಡುಪಿ, ಆ.31: ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ‘ಶಿಖಾನುಪ್ರವೇಶ’ ಪದವಿ ಪ್ರದಾನ ಸಮಾರಂಭ ಗುರುವಾರ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ನಡೆಯಿತು.

ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಜ್ಞಾನಿ ಹಾಗೂ ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ. ರಾವ್ ಆಯುರ್ವೇದ ಚಿಕಿತ್ಸಾ ಪದ್ಧತಿಯ ಮಹತ್ವವನ್ನು ತಿಳಿಸುತ್ತಾ ವೈದ್ಯರು ಕೇವಲ ರೋಗವನ್ನು ಗುಣಪಡಿಸುವುದರ ಬಗ್ಗೆ ಮಾತ್ರ ಯೋಚಿಸದೆ ಗುಣಮಟ್ಟದ ಆರೋಗ್ಯ ಯುತ ಜೀವನವನ್ನು ಸಾಗಿಸಲು ನೆರವಾಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆ ಇದರ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್., ನೂತನವಾಗಿ ಪದವಿಯನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ವೈದ್ಯ ವೃತ್ತಿಗೆ ಆದ್ಯತೆ ನೀಡಿ ಆಯುರ್ವೇದ ಜ್ಞಾನವನ್ನು ಕ್ರಿಯಾತ್ಮಕವಾಗಿ ಉಪಯೋಗಿಸಿ ಸಮಾಜಮುಖಿ ಯಾಗಿರುವಂತೆ ಸಲಹೆ ನೀಡಿದರು.

ಪ್ರಜ್ಞಾ ಎನ್.ಗೆ ಚಿನ್ನದ ಪದಕ: ಸಮಾರಂಭದಲ್ಲಿ ಉತ್ತಮ ಫಲಿತಾಂಶ ಕ್ಕಾಗಿ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಹಳೆದ್ಯಾರ್ಥಿ ಸಂಘದ ವತಿ ಯಿಂದ ನೀಡಲಾಗುವ ಚಿನ್ನದ ಪದಕವನ್ನು ಸ್ನಾತಕ ವಿದ್ಯಾರ್ಥಿನಿ ಡಾ. ಪ್ರಜ್ಞಾ ಎನ್. ಇವರಿಗೆ ನೀಡಲಾಯಿತು.

ಕಾಲೇಜಿನ ಶೈಕ್ಷಣಿಕ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಲತಾ ಕಾಮತ್ ಅರು 73 ಸ್ನಾತಕ ಮತ್ತು 39 ಮಂದಿ ಸ್ನಾತ ಕೋತ್ತರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ. ಅಶೋಕ್‌ಕುಮಾರ್ ಬಿ.ಎನ್. ಹಾಗೂ ಸ್ನಾತಕ ವಿಭಾಗದ ಡೀನ್ ಡಾ. ರಜನೀಶ್ ವಿ.ಗಿರಿ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಉಪಪ್ರಾಂಶುಪಾಲ ರಾದ ಡಾ.ನಿರಂಜನ್ ರಾವ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಮಮತಾ ಕೆ.ವಿ. ಅತಿಥಿಗಳನ್ನು ಸ್ವಾಗತಿಸಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ರಾದ ಡಾ. ನಾಗರಾಜ್ ಎಸ್. ವಂದಿಸಿ, ಸಹಾಯಕ ಪ್ರಾಧ್ಯಾಪಕ ಡಾ. ಅರುಣ್‌ಕುಮಾರ್ ಮತ್ತು ಡಾ.ಶುಭ ಪಿ.ಯು. ಕಾರ್ಯಕ್ರಮ ನಿರೂಪಿಸಿದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News