×
Ad

ಮಣಿಪಾಲ: ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

Update: 2024-05-24 21:19 IST

ಮಣಿಪಾಲ: ಕಾಮಗಾರಿ ನಡೆಯುತ್ತಿದ್ದ ಕಟ್ಟಡದ ನಾಲ್ಕನೆ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಮೇ ೨೩ರಂದು ಸಂಜೆ ವೇಳೆ ಮಣಿಪಾಲ ಈಶ್ವರನಗರ ಎಂಬಲ್ಲಿ ನಡೆದಿದೆ.

ಮೃತರನ್ನು ಕುಕ್ಕೆಹಳ್ಳಿ ಗ್ರಾಮದ ರಘುರಾಮ ಕುಲಾಲ್(50) ಎಂದು ಗುರುತಿಸಲಾಗಿದೆ. ಕಟ್ಟಡದ 4ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಇವರು, ಬಕೆಟ್ ತರಲು ಕಟ್ಟಡದ ಹೊರಮೈಯ ಪ್ಯಾರಾಪೀಟ್ ಮೇಲೆ ಕಾಲು ಇಟ್ಟಿದ್ದರು. ಈ ವೇಳೆ ಅವರು ಕಾಲು ಜಾರಿ ಕೆಳಕ್ಕೆ ೫೦ ಅಡಿ ಆಳಕ್ಕೆ ಬಿದ್ದರೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಕಟ್ಟಡದ ಮಾಲಕ ಗಣೇಶ ಮತ್ತು ಕಟ್ಟಡದ ಗುತ್ತಿಗೆದಾರ ಅಮರೇಶ ಕಟ್ಟಡದ ಗಾರೆ ಕೆಲಸ ಮಾಡುವ ವೇಳೆ ಮುಂಜಾಗೃತ ದೃಷ್ಠಿಯಿಂದ ಯಾವುದೇ ಸುರಕ್ಷತಾ ಸಾಧನಗಳನ್ನು ಅಳವಡಿಸದೇ ಇದ್ದುದರಿಂದ ಈ ಘಟನೆ ನಡೆದಿದೆ ಎಂದು ದೂರಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News