×
Ad

‘ನರ್ಸರಿ ಸಸ್ಯೋತ್ಸವ’ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ

Update: 2023-09-08 17:19 IST

ಉಡುಪಿ, ಸೆ.8: ಉಡುಪಿ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ನರ್ಸರಿಮೆನ್ ಅಸೋಸಿಯೇಷನ್, ತೋಟಗಾರಿಕೆ ಇಲಾಖೆಯ ಸಹಭಾಗಿತ್ವದಲ್ಲಿ ಲಯನ್ಸ್ ಇಂಟರ್‌ನ್ಯಾಶನಲ್-ಲಯನ್ಸ್ ಜಿಲ್ಲೆ 317ಸಿ ಇವರ ಸಹಕಾರದೊಂದಿಗೆ ದೊಡ್ಡಣಗುಡ್ಡೆಯ ರೈತ ಸೇವಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ‘ನರ್ಸರಿ ಸಸ್ಯೋತ್ಸವ-2023’ ಸಸ್ಯಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉದ್ಯಮಿ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ನರ್ಸರಿ ಅತ್ಯಂತ ಉಪಯೋಗಕಾರಿ ಉದ್ಯಮವಾಗಿದೆ. ಖಾಸಗಿ ಹಾಗೂ ಸರಕಾರಿ ಸಹಭಾಗಿತ್ವದಲ್ಲಿ ನರ್ಸರಿ ಉದ್ಯಮಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ಕೆಲಸ ಅಗತ್ಯವಾಗಿ ಆಗಬೇಕು. ಈ ಮೂಲಕ ಉಡುಪಿ ಅಂದ ಹೆಚ್ಚಿಸುವುದರೊಂದಿಗೆ ಹಸುರೀಕರಣಕ್ಕೆ ಪ್ರಾಶಸ್ತ್ಯ ನೀಡಬಹುದು. ಇದರಿಂದ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದರು.

ಅಧ್ಯಕ್ಷತೆಯನ್ನು ಜಿಲ್ಲಾ ನರ್ಸರಿಮೆನ್ ಅಸೋಸಿಯೇಷನ್ ಅಧ್ಯಕ್ಷ ಸುರೇಶ್ ಸುವರ್ಣ ಕುರ್ಕಾಲ್ ವಹಿಸಿದ್ದರು. ಬ್ರಹ್ಮಾವರ ಕೃಷಿ ಸಂಶೋಧನ ಕೇಂದ್ರದ ಸಹಸಂಶೋಧಕ ಡಾ.ಲಕ್ಷ್ಮಣ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಡಾ.ಭುವನೇಶ್ವರಿ, ನರ್ಸರಿಮೆನ್ ಅಸೋಸಿಯೇಷನ್ ಗೌರವಾಧ್ಯಕ್ಷ ಗಣೇಶ್ ಪೂಜಾರಿ, ಲಯನ್ಸ್ ಇಂಟರ್‌ನ್ಯಾಶನಲ್-ಲಯನ್ಸ್ ಜಿಲ್ಲೆ 317ಸಿ ಗವರ್ನರ್ ಡಾ.ನೇರಿ ಕರ್ನೇಲಿಯೋ ಉಪಸ್ಥಿತರಿದ್ದರು.

ಸಂಸ್ಥೆಯ ಉಪಾಧ್ಯಕ್ಷ ಶ್ಯಾಂಪ್ರಸಾದ್ ಭಟ್ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಬಾಸುಮ ಕೊಡಗು ಕಾರ್ಯಕ್ರಮ ನಿರೂಪಿಸಿದರು. ಸಸ್ಯೋತ್ಸವದಲ್ಲಿ ಸಾವಿರಾರು ಬಗೆಯ ವಿವಿಧ ತಳಿಗಳ ಹೂ ಹಾಗೂ ಹಣ್ಣಿನ ಗಿಡಗಳನ್ನು ಪ್ರದರ್ಶಿಸಲಾಗಿತ್ತು. ಈ ಪ್ರದರ್ಶನ ಮತ್ತು ಮಾರಾಟ ಮೇಳ ಸೆ.10ರವರೆಗೆ ಪ್ರತಿದಿನ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News