ಆಗಸ್ಟ್ 4- 5ರಂದು ಕಾನೂನು ಸಚಿವರು ಉಡುಪಿಗೆ ಪ್ರವಾಸ
Update: 2023-08-03 20:27 IST
ಉಡುಪಿ, ಆ.3: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್ ಅವರು ಆಗಸ್ಟ್ 4 ಮತ್ತು 5ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಆಗಸ್ಟ್ 4ರಂದು ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಆಗಸ್ಟ್ 5ರಂದು ಬೆಳಗ್ಗೆ 10:30ಕ್ಕೆ ಬ್ರಹ್ಮಾವರದಲ್ಲಿ ನೂತನವಾಗಿ ಪ್ರಾರಂಭಗೊಳ್ಳುವ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಬಳಿಕ ಅಪರಾಹ್ನ 3:30ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ, 4:30ಕ್ಕೆ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದಲ್ಲಿ ಮಾನವ ಹಕ್ಕುಗಳ ಸಂರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷರೊಂದಿಗೆ ಸಭೆಯಲ್ಲಿ ಪಾಲ್ಗೊಂಡು ಸಂಜೆ 7:30ಕ್ಕೆ ಉಡುಪಿಯಿಂದ ಮಂಗಳೂರಿಗೆ ತೆರಳುವರು.