×
Ad

ಸೆ.26ರಂದು ಗಾಂಧಿಯನ್ ಸೆಂಟರ್‌ನಲ್ಲಿ ಪ್ರೊ.ಬಿ.ಪಿ.ಸಂಜಯ್ ವಿಶೇಷ ಉಪನ್ಯಾಸ

Update: 2023-09-25 19:18 IST

ಮಣಿಪಾಲ, ಸೆ.25: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್‌ನ ಆಶ್ರಯದಲ್ಲಿ ಸೆ.26 ರಂದು ‘ಅಭಿವೃದ್ಧಿ ಸಂವಹನ’ (ಡೆವಲಪ್‌ಮೆಂಟ್ ಕಮ್ಯುನಿಕೇಶನ್) ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿದೆ.

ಸಂವಹನ ಕ್ಷೇತ್ರದಲ್ಲಿ ವಿದ್ವಾಂಸರಾಗಿರುವ ತಮಿಳುನಾಡಿನ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ.ಬಿ.ಪಿ. ಸಂಜಯ್ ಉಪನ್ಯಾಸ ನೀಡಲಿದ್ದಾರೆ. ಬೋಧನೆ ಮತ್ತು ಸಂಶೋಧನೆಯಲ್ಲಿ ನಾಲ್ಕು ದಶಕಗಳ ಸುದೀರ್ಘ ಅನುಭವ ಹೊಂದಿರುವ ಪ್ರೊ.ಸಂಜಯ್, ತಮಿಳುನಾಡಿನ ಕೇಂದ್ರೀಯ ವಿಶ್ವವಿದ್ಯಾಲಯದ ಸ್ಥಾಪಕ ಕುಲಪತಿಗಳಾಗಿ ಮತ್ತು ಭಾರತೀಯ ಸಮೂಹ ಸಂವಹನ ಸಂಸ್ಥೆಯ ನಿರ್ದೇಶಕರಾಗಿಯೂ ಸೇವೆ ನಿರ್ವಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News