ಕನ್ನಡ ಶಾಲೆಗಳ ಉಳಿವಿಗೆ ಪೋಷಕರು ಮುಂದಾಗಲಿ: ಎಸಿ ರಶ್ಮಿ
ಕುಂದಾಪುರ : ಕನ್ನಡ ಭಾಷೆ ಕೇವಲ ಒಂದು ಭಾಷೆಯಲ್ಲ. ಇದು ನಮ್ಮ ಸಂಸ್ಕೃತಿ, ಪರಂಪರೆ, ಇತಿಹಾಸವನ್ನು ಬಿಂಬಿಸು ತ್ತದೆ. ಸಾವಿರಾರು ವರ್ಷಗಳ ಇತಿಹಾಸವುಳ್ಳ ಈ ಭಾಷೆಯನ್ನು ನಾವು ಬೆಳೆಸಬೇಕು. ಕನ್ನಡ ಮಾಧ್ಯಮ ಶಾಲೆಗಳು ಬೆಳೆ ಯಬೇಕು. ಕನ್ನಡ ಶಾಲೆಗಳ ಉಳಿವಿಗೆ ಪೋಷಕರು ಮುಂದಾಗ ಬೇಕು ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಹೇಳಿದ್ದಾರೆ.
ಕುಂದಾಪುರ ತಾಲೂಕು ಆಡಳಿತ, ಕುಂದಾಪುರ ಪುರಸಭೆ ವತಿಯಿಂದ ಕುಂದಾಪುರ ಗಾಂಧಿ ಮೈದಾನದಲ್ಲಿ ಜರಗಿದ ೬೮ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತಿದ್ದರು.
ಕರ್ನಾಟಕದ ಇತಿಹಾಸವನ್ನು ನಾವು ಅರಿಯಬೇಕು. ಕನ್ನಡ ಏಕೀಕರಣಕ್ಕೆ ಬಹಳಷ್ಟು ಹೋರಾಟಗಳು ನಡೆದಿವೆ. ಕರ್ನಾಟಕ ಎಂದರೆ ಕನ್ನಡ ಮಾತನಾಡುವ ಜನರು. ಕನ್ನಡ ಭಾಷೆಯಲ್ಲಿ ವಿಭಿನ್ನತೆ ಇದೆ. ಧಾರವಾಡ ಕನ್ನಡ, ಮೈಸೂರು ಕನ್ನಡ, ಮಂಗಳೂರು ಕನ್ನಡ, ಕುಂದಾಪುರ ಕನ್ನಡದಲ್ಲಿ ಬಹಳ ವೈವಿಧ್ಯತೆ ಇದೆ. ಕುಂದಾಪುರ ಕನ್ನಡ ತುಂಬಾ ಶುದ್ಧ ವಾಗಿದೆ ಎಂದರು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ನಡೆದ ಕ್ರೀಡಾಂಗಣದ ಬಳಿ ಹಾಕಿದ ರಂಗೋಲಿ ಗಮನ ಸೆಳೆಯಿತು.
ಕುಂದಾಪುರ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ, ಪುರಸಭೆ ಸದಸ್ಯರಾದ ದೇವಕಿ ಸಣ್ಣಯ್ಯ, ಚಂದ್ರಶೇಖರ ಖಾರ್ವಿ, ಪ್ರಭಾಕರ್ ವಿ., ಪ್ರಭಾವತಿ ಶೆಟ್ಟಿ, ಶೇಖರ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ, ಸಂದೀಪ್ ಖಾರ್ವಿ, ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಇನ್ಸ್‌ಪೆಕ್ಟರ್ ಜಯರಾಮ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ ಆರ್., ನಗರ ಠಾಣಾಧಿಕಾರಿ ವಿನಯ್ ಕೊರ್ಲಹಳ್ಳಿ, ಗಂಗೊಳ್ಳಿ ಕ್ರೈಂ ಪಿಎಸ್‌ಐ ಬಸವರಾಜ್ ಕನಶೆಟ್ಟಿ ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.