ವಿದ್ಯುತ್ ಕಂಬಕ್ಕೆ ಸ್ಕೂಟರ್ ಢಿಕ್ಕಿ: ಲೈನ್‌ಮೆನ್ ಮೃತ್ಯು
Update: 2026-02-03 22:13 IST
ಹಿರಿಯಡ್ಕ, ಫೆ.3: ಸ್ಕೂಟರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಲೈನ್‌ಮೆನ್ ಮೃತಪಟ್ಟ ಘಟನೆ ಆತ್ರಾಡಿ ಪರೀಕ ಬೊಬ್ಬು ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.
ಮೃತರನ್ನು ಅಥಣಿ ಮೂಲದ ಮಣಿಪಾಲದಲ್ಲಿ ಲೈನ್‌ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಕಾಸ್ ಟೋಗು ರಾಠೋಡ್ (28) ಎಂದು ಗುರುತಿಸ ಲಾಗಿದೆ. ಇವರು ಡಿ.26ರಂದು ರಾತ್ರಿ ಬೈಕಿನಲ್ಲಿ ಬುಕ್ಕಿಗಡ್ಡೆಯಿಂದ ಮಣಿಪಾಲಕ್ಕೆ ಕರ್ತವ್ಯಕ್ಕೆ ತೆರಳುತ್ತಿದ್ದು, ಈ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡಿದ್ದ ವಿಕಾಸ್, ಫೆ.3ರಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.