ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ
Update: 2023-11-15 20:58 IST
ಉಡುಪಿ, ನ.15: ಜಿಲ್ಲೆಯಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆ ಯಡಿ ಒಟ್ಟು 1,49,724 ಪಿಂಚಣಿದಾರರು ಮಾಸಿಕ ವೇತನ ಪಡೆಯುತ್ತಿದ್ದು, ಇವರುಗಳಲ್ಲಿ 1,47,371 ಪಿಂಚಣಿದಾರರ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡಲಾಗಿದ್ದು, ಬಾಕಿ ಉಳಿದ ಪಿಂಚಣಿದಾರರು ಆಧಾರ್ ಜೋಡಣೆ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡಿರುವುದಿಲ್ಲ.
ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡದೇ ಇರುವ ಪಿಂಚಣಿದಾರರ ಖಾತೆಗೆ ನವೆಂಬರ್ ತಿಂಗಳಿನಿಂದ ಪಿಂಚಣಿ ಪಾವತಿಯನ್ನು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಈ ಕೂಡಲೇ ಪಿಂಚಣಿ ಪಾವತಿ ಖಾತೆಗೆ ಆಧಾರ್ ಜೋಡಣೆ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಿ, ಮಾಸಿಕ ಪಿಂಚಣಿ ಪಾವತಿಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.