ಲೋಕಸಭಾ ಚುನಾವಣೆ : ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಜಯಪ್ರಕಾಶ ಹೆಗ್ಡೆ, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಗಣ್ಯರಿಂದ ಮತದಾನ
Update: 2024-04-26 09:50 IST
ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಹಾಗೂ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಗಣ್ಯರು ಇಂದು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು.
ಜಯಪ್ರಕಾಶ್ ಹೆಗಡೆ ಕುಂದಾಪುರ ತಾಲೂಕಿನ ಕೊರ್ಗಿ ಶಾಲೆ, ಕೋಟ ಶ್ರೀನಿವಾಸ್ ಪೂಜಾರಿ ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿರುವ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.
ಅದೇ ರೀತಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಡುಪಿ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿರುವ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದರು.
ಉಡುಪಿ ಪಲಿಮಾರು ಹಿರಿಯ ಯತಿ ಶ್ರೀ ವಿದ್ಯಾಧೀಶ ತೀರ್ಥ, ಕಿರಿಯ ಶ್ರೀ ವಿದ್ಯಾ ರಾಜೇಶ್ವರ ತೀರ್ಥ ಸ್ವಾಮೀಜಿ, ಅದಮಾರು ಕಿರಿಯ ಶ್ರೀ ಈಶ ಪ್ರೀಯ ತೀರ್ಥ ಸ್ವಾಮೀಜಿ ಪಿ ನಗರದ ನಾರ್ತ್ ಸರಕಾರಿ ಶಾಲೆಯಲ್ಲಿನ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.