×
Ad

ನ.8ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

Update: 2023-11-06 21:51 IST

ಉಡುಪಿ, ನ.6: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ನವೆಂಬರ್ 8 ರಂದು ಬೆಳಗ್ಗೆ 11ರಿಂದ ಅಪರಾಹ್ನ 1:00 ಗಂಟೆಯವರೆಗೆ ಉಡುಪಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ. ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661,ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾ ಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದು.

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News