ಲಾರಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು
Update: 2025-08-30 20:50 IST
ಬೈಂದೂರು, ಆ.30: ಲಾರಿಯೊಂದು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಶಿರೂರು ಪೊಲೀಸ್ ಚೆಕ್‌ಪೋಸ್ಟ್ ಬಳಿ ಆ.29ರಂದು ರಾತ್ರಿ 11ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಶಿರೂರು ಹಡವಿನಕೋಣೆ ನಿವಾಸಿ ಗೋಪಾಲ ಮೇಸ್ತ(25) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಮನೋಜ ಎನ್.ಮೇಸ್ತಾ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿರೂರು ಕಡೆಯಿಂದ ಭಟ್ಕಳ ಕಡೆಗೆ ಹೋಗುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಲಾರಿಯು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕಿಗೆ ಹಿಂಬದಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಸವಾರರರು ಬೈಕ್ ಸಮೇತ ಬ್ಯಾರಿಕೇಡ್ ಮೇಲೆ ಬಿದ್ದರೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಗೋಪಾಲ ಮೇಸ್ತ ಸ್ಥಳ ದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.