ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಮಹೇಶ್ ಠಾಕೂರ್
Update: 2023-09-24 18:11 IST
ಉಡುಪಿ, ಸೆ.24: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯ ಮಹೇಶ್ ಠಾಕೂರ್ ಪ್ರತಿಷ್ಠಿತ ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ರಾಜ್ಯ ಗೃಹ ಸಚಿವರು ಹಾಗೂ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಉಪಾಧ್ಯಕ್ಷರಾಗಿ ಆಯ್ಕೆ ಯಾದ ಮಹೇಶ್ ಠಾಕೂರ್ ಅವರನ್ನು ಅಭಿನಂದಿಸಿದರು
2003ರಲ್ಲಿ ಉಡುಪಿಯಲ್ಲಿ ನಡೆದ ಮೂರು ಜಿಲ್ಲೆಗಳ ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿಯಾಗಿ, 2011ರಲ್ಲಿ ನಡೆದ ಕರ್ನಾಟಕ ರಾಜ್ಯ ಹಿರಿಯರ ಕ್ರೀಡಾಕೂಟದ ಸಂಘಟನಾ ಸಮಿತಿಯ ಕಾರ್ಯದರ್ಶಿಯಾಗಿ ಮತ್ತು 2019, 2021 ಮತ್ತು 2022ರಲ್ಲಿ 20ರ ನಡೆದ ವಿವಿಧ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.