×
Ad

ಮಲ್ಪೆ | ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಪ್ರಕರಣ : ಆರೋಪಿ ಸೆರೆ

Update: 2026-06-26 21:40 IST

ಮಲ್ಪೆ, ಜೂ.26: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಓರ್ವ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಶಿರೂರು ಮುಸ್ಲಿ ಮೊಹಲ್ಲಾದ ಜೆಎಂ ಕ್ರಾಸ್ ರಸ್ತೆಯ ನಿವಾಸಿ ಮೆಹರಾಜ್(19) ಬಂಧಿತ ಆರೋಪಿ. ಈತ ಮಲ್ಪೆಯ ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಹಾಗೂ ಕಾಪು, ಬ್ರಹ್ಮಾವರ, ಉಡುಪಿ, ಮಣಿಪಾಲದಲ್ಲಿರುವ ಕಾಲೇಜು ವಿದ್ಯಾರ್ಥಿ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿಯಂತೆ ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ತಂಡ ದಾಳಿ ನಡೆಸಿ ಮೆಹರಾಜ್‌ನನ್ನು ಬಂಧಿಸಿತು.

ಆತನಿಂದ 1 ಗ್ರಾಂ 3 ಮಿಲಿ ಗ್ರಾಂ ತೂಕದ ಎಂಡಿಎಂಎ, ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿ ಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 1,52,000ರೂ. ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News