ಮಲ್ಪೆ: ನೀರಿಗೆ ಬಿದ್ದು ಮೀನುಗಾರ ಮೃತ್ಯು
Update: 2025-11-09 23:28 IST
ಸಾಂದರ್ಭಿಕ ಚಿತ್ರ
ಮಲ್ಪೆ: ಬೋಟಿನಿಂದ ಮಲ್ಪೆ ಧಕ್ಕೆಯ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನ.7ರಂದು ನಡೆದಿದೆ.
ಮೃತರನ್ನು ಕೇರಳ ತಿರುವನಂತಪುರದ ರಥೀಶ್ (37) ಎಂದು ಗುರುತಿಸಲಾಗಿದೆ.
ಮಲ್ಪೆ ಬಂದರಿನಲ್ಲಿ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು, ಆಕಸ್ಮಿಕವಾಗಿ ಬೋಟಿನಿಂದ ಧಕ್ಕೆಯ ನೀರಿಗೆ ಬಿದ್ದರೆನ್ನಲಾಗಿದೆ. ಅವರನ್ನು ಮುಳುಗು ತಜ್ಞ ಈಶ್ವರ ಮಲ್ಪೆ ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.