×
Ad

ಮಲ್ಪೆ | ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ: ಹಲವು ಮಂದಿ ಅಸ್ವಸ್ಥ

Update: 2026-01-26 12:49 IST

ಮಲ್ಪೆ : ಪ್ರವಾಸಿಗರನ್ನು ವಿಹಾರಕ್ಕೆ ಕರೆದೊಯ್ಯುತ್ತಿದ್ದ ದೋಣಿಯೊಂದು ಸಮುದ್ರದಲ್ಲಿ ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಸೇರಿದಂತೆ ಹಲವು ಮಂದಿ ಅಸ್ವಸ್ಥಗೊಂಡ ಘಟನೆ ಸೋಮವಾರ ಬೆಳಗ್ಗೆ ಕೋಡಿಬೆಂಗ್ರೆ ಬೀಚ್ ಸಮೀಪ ನಡೆದಿದೆ.

ರೆಸಾರ್ಟ್‌ನಲ್ಲಿ ಉಳಿದಿದ್ದ ಪ್ರವಾಸಿಗರನ್ನು ವಿಹಾರಕ್ಕೆಂದು ದೋಣಿಯಲ್ಲಿ ಸಮುದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಇದರಲ್ಲಿ ಸುಮಾರು 10 ಮಂದಿ ಪ್ರವಾಸಿಗರಿದ್ದರು. ಇವರು ಯಾರು ಕೂಡ ಲೈಫ್ ಜಾಕೆಟ್ ಧರಿಸಿಲ್ಲ ಎಂದು ತಿಳಿದುಬಂದಿದೆ.

ನೀರಿನ ಮಧ್ಯೆ ದೋಣಿ ಅಕಸ್ಮಿಕವಾಗಿ ಪಲ್ಟಿಯಾಗಿದ್ದು, ಎಲ್ಲ ಪ್ರವಾಸಿಗರು ನೀರಿಗೆ ಬಿದ್ದರೆಂದು ತಿಳಿದುಬಂದಿದೆ.

ಇದರಲ್ಲಿ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಆದರೆ ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಇಬ್ಬರು ಗಂಭೀರ ಸ್ಥಿತಿಯಲ್ಲಿ ಖಾಸಗಿ ಚಿಕಿತ್ಸೆ ಪಡೆಯುಯತ್ತಿದ್ದಾರೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಧಾವಿಸಿದ್ದ ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News