×
Ad

ಮಲ್ಪೆ: ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಮೃತ್ಯು

Update: 2024-04-21 15:44 IST

ಮಲ್ಪೆ, ಎ.21: ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ.

ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಕಲಿಯುತ್ತಿದ್ದು, ಒಟ್ಟು ಐವರು ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದಿದ್ದರು. ಇವರೆಲ್ಲ ನೀರಿನಲ್ಲಿ ಆಡುತ್ತಿದ್ದ ವೇಳೆ ನಾಗೇಂದ್ರ ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋದರೆನ್ನಲಾಗಿದೆ.

ಕೂಡಲೇ ಮುಳುಗುತಜ್ಞ ಈಶ್ವರ ಮಲ್ಪೆ ತಂಡ ಕಾರ್ಯಾಚರಣೆ ನಡೆಸಿ ನಾಗೇಂದ್ರನನ್ನು ಮೇಲಕ್ಕೆ ಎತ್ತಿದರು. ಬಳಿಕ ತಮ್ಮ ಆ್ಯಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಅವರು ದಾರಿಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News