×
Ad

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಸಂದೇಶ: ಆರೋಪಿ ಸಂಪತ್ ಸಾಲಿಯಾನ್ ಬಂಧನ

Update: 2025-05-05 17:01 IST

ಸಂಪತ್ ಸಾಲಿಯಾನ್

ಉಡುಪಿ: ಮೇ 2ರಂದು ಸಂಪುಸಾಲಿನ್ (ಸಂಪು ಎಸ್ ಸಾಣೂರು) ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ರಾಜಕೀಯ ವೈಷಮ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಚೋದನಕಾರಿ ಸಂದೇಶ ಹಾಕಿದ ಬೆಂಗಳೂರು ಹೋಮ್‌ಗಾರ್ಡ್ ಕಚೇರಿಯ ಉದ್ಯೋಗಿ ಸಂಪತ್ ಸಾಲಿಯಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ರಾಜಕೀಯ ಪಕ್ಷದ ಮುಖಂಡರ ಹಾಗೂ ಹಿಂದುಗಳಿಗೆ ನೆಮ್ಮದಿ ಎಂದು ಪ್ರಚೋದಿಸಿ ವೈರತ್ವವನ್ನು ಬೆಳಸಿ ದ್ಷೇಷ ಭಾವನೆ ಹರಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವ ಆರೋಪದ ಮೇಲೆ ಈತನನ್ನು ಬಂಧಿಸಲಾಗಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಸೂರಜ್ ಕುಕ್ಕುಂದೂರು ಎಂಬವರು ದೂರಿನಂತೆ ಅಪರಾಧ ಕ್ರಮಾಂಕ : 68/2025 ಕಲಂ 353(2) ಬಿಎನ್‌ಎಸ್‌ನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ತನಿಖೆಯ ಬಳಿಕ ಆರೋಪಿ ಬೆಂಗಳೂರಿನ ಹೋಂಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂಪತ್ ಸಾಲಿಯಾನ್ ಎಂಬಾತನನ್ನು ಮೇ 4ರಂದು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News