ಮಲ್ಪೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
Update: 2025-10-12 21:00 IST
ಮಲ್ಪೆ: ಗರಡಿಮಜಲಿನ ನಿವಾಸಿ ಸುಧಾಕರ(55) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಅ.10ರ ಬೆಳಗ್ಗೆಯಿಂದ ಅ.11ರ ಸಂಜೆಯ ಮಧ್ಯಾವಧಿಯಲ್ಲಿ ವೈಷ್ಣವಿ ಲೇಔಟ್ ನಲ್ಲಿರುವ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.