×
Ad

ಮಣಿಪಾಲ: ಅಪ್ರಾಪ್ತೆಯ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ

ಉಡುಪಿ ಮಹಿಳಾ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲು: ಆರೋಪಿ ಬಂಧನ

Update: 2025-11-07 11:19 IST

ಉಡುಪಿ, ನ.7: ಮಣಿಪಾಲದ ಲಾಡ್ಜ್‌ನಲ್ಲಿ ಅಪ್ರಾಪ್ತೆಯ ಜೊತೆ ಬಿಜೆಪಿ ಮುಖಂಡನ ಪುತ್ರನೋರ್ವ ಸಿಕ್ಕಿಬಿದ್ದಿದ್ದು, ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ.

ಆರೋಪಿ ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ(20) ಎಂಬಾತನನ್ನು ಪೊಲೀಸರು ಬಂಧಿಸಿ, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ಪುತ್ರನಾಗಿರುವ ಈತ, ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗ್ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಇದರ ಮಾಹಿತಿ ತಿಳಿದು ಬಾಲಕಿಯ ಪೋಷಕರು ನೇರವಾಗಿ ಪೊಲೀಸರೊಂದಿಗೆ ಲಾಡ್ಜ್‌ಗೆ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈತ ಲಾಡ್ಜ್‌ಗೆ ಬಾಲಕಿಯ ನಕಲಿ ಆಧಾರ್ ಕಾರ್ಡ್ ನೀಡಿದ್ದ ಎಂದು ದೂರಲಾಗಿದೆ.

ಈ ಬಗ್ಗೆ ಮಾಹಿತಿ ತಿಳಿದ ಇನ್ನೋರ್ವ ಬಾಲಕಿಯೂ ಶ್ರೀಶಾಂತ್ ಪೂಜಾರಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಆಕೆಯನ್ನೂ ಮದುವೆ ಆಗುವುದಾಗಿ ನಂಬಿಸಿದ ಶ್ರೀಶಾಂತ್ ಪೂಜಾರಿ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News