ಮಣಿಪಾಲ : ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಚಾಲಕ ಪರಾರಿ
Update: 2025-08-04 12:14 IST
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮಣಿಪಾಲದಿಂದ ಉಡುಪಿಯತ್ತ ಅತೀ ವೇಗದಲ್ಲಿ ಆಗಮಿಸಿದ ಬೆಂಗಳೂರು ನೋಂದಣಿ ಇರುವ ಕಾರು ಇದಾಗಿದ್ದು, ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದೆ. ಅಪಘಾತ ನಡೆದ ಕೂಡಲೇ ಆತ ಕಾರನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಂತಿಗಳು ರಸ್ತೆಗೆ ಬಿದ್ದಿವೆ. ಕಾರಿನ ಮುಂಭಾಗ ಜಖಂಗೊಂಡಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.